ಅಧಿವೇಶನದ ಸಂದರ್ಭದಲ್ಲಿ ಯಾವುದೇ ರೀತಿಯ ಭದ್ರತಾ ಲೋಪಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್
ಬೆಳಗಾವಿ : ಗೃಹ ಮಂತ್ರಿಗಳಾದ ಡಾಕ್ಟರ್ ಜಿ ಪರಮೇಶ್ವರ್ ರವರು ಇಂದು ಬೆಳಗಾವಿಯಲ್ಲಿ ಗೃಹ ಇಲಾಖೆಯ ಪ್ರಗತಿ ಪರಿಶೀಲಿಸಿ, ಮುಂದಿನ ತಿಂಗಳು ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಇಲಾಖೆಯು ಕೈಗೊಂಡಿರುವ ಭದ್ರತಾ ವ್ಯವಸ್ಥೆ ಹಾಗೂ ಅಗತ್ಯ ಕ್ರಮಗಳ ಕುರಿತು ಸಮಗ್ರ ಮಾಹಿತಿ ಪಡೆದರು.
ಅಧಿವೇಶನದ ಸಂದರ್ಭದಲ್ಲಿ ಯಾವುದೇ ರೀತಿಯ ಭದ್ರತಾ ಲೋಪಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಜರಿದ್ದರು.