ನಾಳೆ ಜಿಲ್ಲಾ ಆಡಳಿತದಿಂದ “ಶ್ರೀ ಮಹಾವೀರ ಜಯಂತಿ” ಆಚರಣೆಯ ಹಾಗೂ ಜಿ.ಪಿ.ಟಿ.ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಿರ್ಮಿಸಿರುವ“ಕಲ್ಪವೃಕ್ಷ” ಸಭಾಂಗಣದ ಲೋಕಾರ್ಪಣೆ
ತುಮಕೂರು(ಕ.ವಾ.)ಏ.9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಶ್ರೀ ಅಜಿತನಾಥ ಸ್ವಾಮಿ ಜೈನ ಶ್ವೇತಾಂಬರಿ ಮೂರ್ತಿ ಪೂಜಕ ಸಂಘ ಹಾಗೂ ಶ್ರೀ ಪಾರ್ಶ್ವನಾಥ ಜಿನಮಂದಿರದ ಸಹಯೋಗದಲ್ಲಿ ಏಪ್ರಿಲ್ 10ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ “ಶ್ರೀ ಮಹಾವೀರ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಶ್ರೀ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು, ವಿವಿಧ ಸಮುದಾಯದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೆ ಸಹಕರಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ.
***********
ಕಲ್ಪವೃಕ್ಷ ಸಭಾಂಗಣದ ಲೋಕಾರ್ಪಣೆ
ತುಮಕೂರು(ಕ.ವಾ.)ಏ.9: ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಪಾಲಿಟೆಕ್ನಿಕ್, ಜಿ.ಪಿ.ಟಿ.ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಿರ್ಮಿಸಿರುವ “ಕಲ್ಪವೃಕ್ಷ ಸಭಾಂಗಣದ ಲೋಕಾರ್ಪಣೆ, ಗುರುವಂದನಾ ಸಮಾರಂಭ ಹಾಗೂ 2024-25ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಕ್ರೀಡಾ ಸಂಘಗಳ ಸಮಾರೋಪ ಸಮಾರಂಭ”ವನ್ನು ಏಪ್ರಿಲ್ 10ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ.
ಕಾರ್ಯಕ್ರಮವು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಲ್ಪವೃಕ್ಷ ಸಭಾಂಗಣದಲ್ಲಿ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ: ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ರಾಮಕೃಷ್ಣ ವಿವೇಕಾನಂದ ಆಶ್ರಯದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸುವರು.
ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಪಾಲಿಟೆಕ್ನಿಕ್ನ ಪ್ರಾಂಶುಪಾಲ ಮೇಜರ್ ಅನಿಲ್ ಕುಮಾರ್ ಜಿ. ರೆಕ್ಟಾರ್ ತಿಳಿಸಿದ್ದಾರೆ.