ತುಮಕೂರಿನಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ
ತುಮಕೂರು: ತುಮಕೂರು ನಗರದ ಟೌನ್ಹಾಲ್ ಮುಂಭಾಗದಲ್ಲಿ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 1000 ಕೆ.ಜಿ. ತೂಕದ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ಪುತ್ಥಳಿ ಅನಾವರಣ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಟೌನ್ಹಾಲ್ ವರೆಗೆ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಜರುಗಲಿದೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್., ಶಾಸಕರು, ಸಂಸದರು ಮತ್ತು ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರಗೌಡ ಅವರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ