ಸರ್ದಾರ್ ವಲ್ಲಬಾಯ್ ಪಟೇಲ್ ಅವರ ತತ್ವ- ಆದರ್ಶಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು : ಈರಪ್ಪನಾಯಕ
ಮಧುಗಿರಿ: ವಿದ್ಯಾರ್ಥಿಗಳು ಸರ್ದಾರ್ ವಲ್ಲಬಾಯ್ ಪಟೇಲ್ ಅವರ ತತ್ವ- ಆದರ್ಶಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಪ್ರಾಂಶುಪಾಲ ಈರಪ್ಪನಾಯಕಈರಪ್ಪನಾಯಕ ತಿಳಿಸಿದರು.
ತಾಲೂಕಿನ ಮಿಡಿಗೇಶಿ ಸರ್ಕಾರಿ ಪ್ರಥಮ ದರ್ಜೆ ಇತಿಹಾಸ ವಿಭಾಗದವರು ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು ರಾಷ್ಟ್ರೀಯ ಭಾವೈಕ್ಯತೆಯ ಬಗ್ಗೆ ಭಾರತದ ಪ್ರತಿಯೊಬ್ಬ ನಾಗರೀಕನಿಗೂ ಕೂಡ ಅರಿವು ಬಂದಾಗ ಮಾತ್ರ ಭಾರತ ದೇಶವನ್ನು ಸದೃಢವಾಗಿ ನಿರ್ಮಿಸಬಹುದು ಎಂದರು
ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೆಸಿ ಬಸವರಾಜು ಮಾತಾನಾಡಿ ವಿಶೇಷ ಉಪನ್ಯಾಸಗಳು ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದಾಗ ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಹಾಗೂ, ಜೀವನದ ಎಲ್ಲಾ ಸವಾಲುಗಳನ್ನು ಎದುರಿಸ ಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಡಾ. ಎಲ್ ಮಂಜು ಭಾರ್ಗವಿ, ಪ್ರಾಂಶುಪಾಲ ಡಾ.ನಾಗಭೂಷಣ್, ಪ್ರಾಧ್ಯಾಪಕರಾದ ಅನುಪಮ, ಪುಟ್ಟರಾಜು, ಷಣ್ಮುಖಾಚಾರಿ, ರಜಿನಿ, ಚಂದನ,ಸೀತಾರಾಮ್ ಬಾಬು,ರಾಮಚಂದ್ರಯ್ಯ, ನಾಗೇಶ ಮತ್ತಿತರರು ಉಪಸ್ಥಿತರಿದ್ದರು.