
ಸೌರಭ ಕಾನ್ವೆಂಟಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ವರದ: ಗಿರೀಶ್ ಕೆ ಭಟ್, ತುರುವೇಕೆ.
ತುರುವೇಕೆರೆ : ತಾಲ್ಲೂಕಿನ ಮಾಯಸಂದ್ರದ ಸೌರಭ ಕಾನ್ವೆಂಟಿನಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ವಿಶೇಷತೆಗಳು, ಅದರ ಮಹತ್ವದ ಬಗ್ಗೆ ತಿಳಿಸಿಕೊಟ್ಟ ಶಾಲೆಯ ಮುಖ್ಯ ಶಿಕ್ಷಕ, ಮಾಯಸಂದ್ರ ಹೋಬಳಿ ಕಸಾಪ ಅಧ್ಯಕ್ಷ ಮುನಿರಾಜು ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬ ಹಿಂದೂಗಳ ಪವಿತ್ರವಾದ ಹಬ್ಬಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನು ಮಕ್ಕಳಿಗೆ ವಿಶೇಷ ಆಕರ್ಷಣೆಯುಳ್ಳ ದೇವರಾಗಿದ್ದಾರೆ. ಪೋಷಕರು ಸಹ ಮಕ್ಕಳಿಗೆ ಶ್ರೀಕೃಷ್ಣ, ರಾಧೆಯ ವೇಷಗಳನ್ನು ಹೆಚ್ಚು ತೊಡಿಸಿ ಸಂಭ್ರಮಿಸುತ್ತಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕಲ್ಪನಾ ವಹಿಸಿದ್ದರು. ಶಿಕ್ಷಕಿ ಲಲಿತಾ ಭಟ್ ಶ್ರೀಕೃಷ್ಣನ ಗೀತೆಗಳನ್ನು ಹಾಡಿ ರಂಜಿಸಿದರು. ಶಾಲೆಯ ಪುಟಾಣಿ ಮಕ್ಕಳು ಶ್ರೀಕೃಷ್ಣ, ರಾಧೆಯ ವೇಷಭೂಷಣಗಳನ್ನು ಧರಿಸಿ ಸಂಭ್ರಮಿಸಿದರು. ಶಿಕ್ಷಕರಾದ ಗೀತಾಮಣಿ, ಸೌಮ್ಯ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
