ಕೊರಟಗೆರೆ : ಉತ್ತಮ ಮತ್ತು ದಕ್ಷ ಆಡಳಿತದಿಂದ ತಾಲ್ಲೂಕು ಸರ್ವತೋ ಮುಖ ಪ್ರಗತಿ ಸಾಧ್ಯ ಎಂದು ತಹಶೀಲ್ದಾರ್ ಮಂಜುನಾಥ್ ಅಭಿಪ್ರಾಯಪಟ್ಟರು.
ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಗ್ರಾಮೀಣ ಮಾಹಿತಿ ತಂತ್ರಜ್ಞಾನ ಕೇಂದ್ರ ಗರುಗದೊಡ್ಡಿ ಸಂಯು ಕ್ತಾಶ್ರಯದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿ ಕೊಂಡಿದ್ದ ‘ಉತ್ತಮ ಆಡಳಿತ ವಾರ್ ತಾಲ್ಲೂಕು ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆಡಳಿತ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಧೈಯವಾಗಿದೆ ಎಂದರು.
ಉತ್ತಮ ಆಡಳಿತದಿಂದ ಸಮಾಜದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಸಾಧ್ಯ. ಸಾಮಾಜಿಕ ಹಕ್ಕುಗಳೆಂದರೆ ಕೇವಲ ವಸತಿ, ಆಹಾರ ಮತ್ತು ಶಿಕ್ಷಣ ನೀಡುವುದಷ್ಟೇ ಅಲ್ಲ, ವೈಯಕ್ತಿಕ ಭದ್ರತೆ ನೀಡಿ, ಹಕ್ಕುಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ. ತಳಮಟ್ಟದಿಂದ ಆಡಳಿತವನ್ನು ಬಲಪಡಿಸುವ ಮತ್ತು ಸಾಮಾನ್ಯ ಜನರಿಗೆ ಸರ್ಕಾರಿ ಸೇವೆಗಳನ್ನು ಪರಿಣಾಮಕಾ ರಿಯಾಗಿ ತಲುಪಿಸುವುದು ‘ಸುಶಾಸನ ಸಪ್ತಾಹ ಅಭಿಯಾನ’ದ ಮುಖ್ಯ ಗುರಿ ಯಾಗಿದೆ ಎಂದು ಹೇಳಿದರು.
ಪೌತಿ ಖಾತೆ ಮಾಡುವಲ್ಲಿ ಕೊರಟ ಗೆರೆ ತಾಲ್ಲೂಕು ರಾಜ್ಯದಲ್ಲಿಯೇ 6ನೇ ಸ್ಥಾನದಲ್ಲಿದೆ. ಕಂದಾಯ ಇಲಾಖೆಯ ಸಿಬ್ಬಂದಿಗಳೂ ಸಹ ಪ್ರತಿದಿನ ಅಂದಿನ ಕೆಲಸ ಅಂದೇ ಮುಗಿಸುತ್ತಾರೆ ಸಾರ್ವ ಜನಿಕರಿಗೆ ಯಾವುದೇ ತೊಂದರೆ ನೀಡ ದಂತೆ ಕೆಲಸ ಮಾಡಿಕೊಡಬೇಕೆಂದು ತಾಲ್ಲೂಕು ಮಟ್ಟದ ಅಧಿಕಾರಿ ಸಿಬ್ಬಂದಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಗರುಗದೊಡ್ಡಿ ಗ್ರಾಮೀಣ ಮಾಹಿತಿ ತಂತ್ರಜ್ಞಾನ ಕೇಂದ್ರದ ಅಧ್ಯಕ್ಷ ಜಿ.ವಿ. ವೀರೇಂದ್ರ ಪ್ರಸಾದ್ ಮಾತನಾಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಸುಶಾಸನ ಸಪ್ತಾಹ ಪ್ರಶಾಸನ ಗ್ರಾಮಗಳ ಕಡೆಗೆ ಎಂಬ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.
ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಈ ಸಪ್ತಾಹದ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅರಿವು ಮೂಡಿಸಲು ಏರ್ಪಡಿ ಸಿರುವ ಕಾರ್ಯಾಗಾರವು ಆಡಳಿತವನ್ನು ಪರಿಣಾಮಕಾರಿಯಾಗಿ ತಲುಪಿಸಲು ತುಂಬಾ ಸಹಕಾರಿಯಾಗಿದೆ ಎಂದರು.
ಶಿಶು ಅಭಿವೃದ್ಧಿ ಅಧಿಕಾರಿ ಗಂಗಾ ಧರ್ ಮಾತನಾಡಿ, ಅಧಿಕಾರಿಗಳು ಸಮಯ ಪ್ರಜ್ಞೆಯನ್ನು ಪಾಲಿಸಬೇಕು ಹಾಗೂ ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ನೀಡದಿದ್ದರೆ ಈ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ. ವರ್ಷವಿಡೀ ಉತ್ತಮ ಆಡಳಿತ ವರ್ಷವೆಂದೇ ಅಧಿಕಾರಿಗಳು ತಿಳಿಯಬೇಕು ಎಂದರು.
ಗ್ರೇಡ್-2 ತಹಸೀಲ್ದಾರ್ ರಾಮದಾ ಸಪ್ಪ ಮಾತನಾಡಿ, ನಮ್ಮ ಇಲಾಖೆಯಲ್ಲಿ ಕೆಲವೊಮ್ಮೆ ಕಂಪ್ಯೂಟರ್ ಕೆಲಸ ತಾಂತ್ರಿಕ ದೋಷ ಸರ್ವರ್ ಸಮಸ್ಯೆಯಿಂದ ಸಾರ್ವ ಜನಿಕರ ಕೆಲಸ ಕಾರ್ಯಗಳಿಗೆ ಅಡಚಣೆ ಯಾಗಬಹುದೇ ವಿನಃ ಉದ್ದೇಶ ಪೂರಕ ವಾಗಿ ಯಾರಿಗೂ ತೊಂದರೆ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ತಿಳಿಸಿದರು.
ಮಾನವ ಹಕ್ಕುಗಳ ಸಂರಕ್ಷಣ ಸಮಿತಿ ರಾಜ್ಯಾಧ್ಯಕ್ಷ ಸತ್ಯಪ್ಪ ಮಾತನಾಡಿ, ಕೊರಟಗೆರೆಯಲ್ಲಿ ತಹಸೀಲ್ದಾರ್ ಅತ್ಯುತ್ತಮ ವಾಗಿ ಮತ್ತು ಪ್ರಾಮಾಣಿಕವಾಗಿ ದಕ್ಷತೆ ಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ತಹಶೀಲ್ದಾರ್ ಮಂಜುನಾಥ್ ಅವರನ್ನು ಗೌರವಿಸಲಾಯಿತು. ಕಾರ್ಯಾಗಾರದಲ್ಲಿ ಗರುಗದೊಡ್ಡಿ ಗ್ರಾಮೀಣ ಮಾಹಿತಿ ತಂತ್ರಜ್ಞಾನ ಕೇಂದ್ರದ ಕಾರ್ಯದರ್ಶಿ ಜಿ.ವಿ. ನಾಗೇಂದ್ರ ಕುಮಾರ್, ನಿವೃತ್ತ ಶಿಕ್ಷಕ ಓ. ರಾಮಕೃಷ್ಣ, ರಾಮಾಂಜಿ ನೇಯ ಮಾತನಾಡಿದರು.


